ಮಂಜೇಶ್ವರ: ಸುರಿಬೈಲು ಶ್ರೀಸದಾಶಿವ ದೇವಸ್ಥಾನದ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಭಾನುವಾರ ಬಡಾಜೆಬೀಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ಮನೆಯಲ್ಲಿ ನಡೆಯಿತು.
ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷ, ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ. ಗೋಪಾಲಕೃಷ್ಣ ತಂತ್ರಿ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಗ್ರಾಮಚಾವಡಿ, ಕಾರ್ಯಾಧ್ಯಕ್ಷ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಬಲರಾಂ ಭಟ್ ಕಾಕುಂಜೆ, ಸಂಧ್ಯಾ ಗೋಪಾಲಕೃಷ್ಣ ತಂತ್ರಿ, ಸಂಗೀತ ತಂತ್ರಿ, ವಿಘ್ನೇಶ್ ತಂತ್ರಿ ಉಪಸ್ಥಿತರಿದ್ದರು. ಗೋಪಾಲ ಶೆಟ್ಟಿ ಅರಿಬೈಲು, ಹರಿಶ್ಚಂದ್ರ ಮಂಜೇಶ್ವರ ಶುಭಹಾರೈಸಿದರು. ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಹರೀಶ್ ಶೆಟ್ಟಿ ಮಾಡ ಸ್ವಾಗತಿಸಿ, ನಿರೂಪಿಸಿದರು. ಈಶ್ವರ ಮಾಸ್ತರ್ ವಂದಿಸಿದರು. ಬ್ರಹ್ಮಕಲಶೋತ್ಸವ ಯಶಸ್ವಿಗೆ ರೂಪಿಸಲಾದ ವಿವಿಧ ಸಮಿತಿ, ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸುರಿಬೈಲು ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ
0
ಏಪ್ರಿಲ್ 09, 2023