ನವದೆಹಲಿ: ಭ್ರಷ್ಟಾಚಾರ ಮತ್ತು ಕಪ್ಪುಹಣ ತಡೆಗೆ ಸ್ಥಿರ ಮತ್ತು ಚರಾಸ್ಥಿ ದಾಖಲೆಗಳನ್ನು ನಾಗರಿಕರ ಆಧಾರ್ ಸಂಖ್ಯೆಯ ಜೊತೆ ಜೋಡಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ಸೋಮವಾರ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸಲು ಹಣಕಾಸು, ಕಾನೂನು, ವಸತಿ, ನಗರ ವ್ಯವಹಾರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ನಾಲ್ಕು ವಾರಗಳ ಗಡುವು ನೀಡಿದೆ.
'ಇದು ಉತ್ತಮ ವಿಷಯ, ಪ್ರತಿಕ್ರಿಯೆಗಳು ಬರಲಿ' ಎಂದು ಮೌಖಿಕವಾಗಿ ತಿಳಿಸಿರುವ ನ್ಯಾಯಪೀಠವು, ಜು.18ರಂದು ಮುಂದಿನ ವಿಚಾರಣೆ ನಡೆಸಲು ಪಟ್ಟಿ ಮಾಡಿದೆ.