ಮುಂಬೈ: ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸ್ವೀಡಿಷ್ ಪ್ರಜೆಯನ್ನು ಮುಂಬೈ ಪೊಲೀಸರು ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ಧಾರೆ.
ಇಂಡಿಗೋ ವಿಮಾನ(GE-1052)ದಲ್ಲಿ ಗುರುವಾರ ಘಟನೆ ನಡೆದಿದ್ದು ಬಂಧಿತ ಆರೋಪಿಯನ್ನು ಕ್ಲಾಸ್ ಎರಿಕ್ ಜೊನಾಸ್ ವೆಸ್ಟ್ಬರ್ಗ್(63) ಎಂದು ತಿಳಿದು ಬಂದಿದೆ.
ಬ್ಯಾಂಕಾಕ್ನಿಂದ ಪ್ರಯಾಣಿಸುವ ವೇಳೆ ಆರೋಪಿ ಸಿಬ್ಬಂದಿ ಊಟ ಬಡಿಸುವ ಸಮಯದಲ್ಲಿ ಅನುಚಿತವಾಗಿ ವರ್ತಿಸಿದ್ದು ಈ ಬಗ್ಗೆ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಎಚ್ಚರಿಕೆ ಬಳಿಕ ಸುಮ್ಮನಾಗದ ಆರೋಪಿಯೂ ಲೈಂಗಿಕ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಗ ಗಗನ ಸಖಿಯೂ ತನ್ನ ರಕ್ಷಣೆಗಾಗಿ ಜೂಗಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಗಗನಸಖಿ ಸಹಾಯಕ್ಕೆ ದಾವಿಸಿದವರ ಜೊತೆ ಆರೋಪಿಯೂ ವಾಗ್ವಾದ ನಡೆಸಿದ್ದು ಸಹ ಪ್ಯಾಸೆಂಜರ್ ಒಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ವಿಮಾನ ಮುಂಬೈನಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ಸಿಬ್ಬಂದಿ ಆರೋಪಿಯನ್ನು ಸಹರ್ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಅಂಧೇರಿ ಮೆಟ್ರೋಪಾಲಿಟನ್ ಕೋರ್ಟ್ಗೆ ಹಾಜರುಪಡಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ 20,000 ಸಾವಿರ ದಂಡವಬನ್ನು ವಿಧಿಸಿ ಜಾಮೀನಿನ ಮೇಲೆ ಬಿಟ್ಟು ಕಳುಹಿಸಿದ್ದಾರೆ.