ಕಾಸರಗೋಡು: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ ಹಾಗೂ ಕೊಚ್ಚಿನ್ ಕನ್ನಡ ಸಂಘ ವತಿಯಿಂದ ಏ. 30ರಂದು ಎರ್ನಾಕುಳಂ ಟೌನ್‍ಹಾಲ್ ಸಭಾಂಗಣದಲ್ಲಿ ನಡೆಯಲಿರುವ ಕೊಚ್ಚಿನ ಕನ್ನಡ ಸಂಸ್ಕøತಿ ಉತ್ಸವ-2023 ಹಾಗೂ ಸಾಧಕ ಪತ್ರಕರ್ತರಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊಡಮಾಡುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿತು.
ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಹಾರೈಸಿದರು.
ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾಸರಗೋಡು ಜಿಲ್ಲಾಘಟಕ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೊಚ್ಚಿನ್ ಕನ್ನಡ ಸಂಘದ ಪದಾಧಿಕಾರಿಗಳಾದ ಶ್ರೀಕಾಂತ್ ಅನವಟ್ಟಿ, ಡಿ. ಶ್ರೀನಿವಾಸ ರಾವ್, ಎಚ್.ಜೆ ವಜ್ರಾಂಗ, ಎ. ತ್ಯಾಗರಾಜ್, ಶ್ರೀಮತಿ ತ್ಯಾಗರಾಜ್, ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧೀ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ, ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಗಂ, ಕೊಚ್ಚಿನ್ ಉತ್ಸವ ಸಮಿತಿ ಸಂಚಾಲಕ, ಪತ್ರಕರ್ತ ರವಿ ನಾಯ್ಕಾಪು, ಪ್ರೊ. ಎ. ಶ್ರೀನಾಥ್, ವಾಮನ ರಾವ್ ಬೇಕಲ್ ಉಪಸ್ಥಿತರಿದ್ದರು.
ಏ. 30ರಂದು ಎರ್ನಾಕುಳಂ ಟೌನ್‍ಹಾಲ್ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಬೆಳಗ್ಗೆ 10ಕ್ಕೆ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸಿ. ಸಓಮಶೇಖರ್ ಉದ್ಘಾಟಿಸುವರು. ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಅಧ್ಯಕ್ಷ ಶಿವಾನಂದ ತಗಡೂರು ಅದ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಪೂರ್ವಭಾವಿಯಾಗಿ ನಡೆಯುವ ಸಾಂಸ್ಕøತಿಕ ಶೋಭಾಯಾತ್ರೆಯನ್ನು ಕೊಚ್ಚಿ ಮಹಾನಗರಪಾಲಿಕೆ ಸದಸ್ಯೆ ಸುಧಾದಿಲೀಪ್ ಉದ್ಘಾಟಿಸುವರು.
ಕೊಚ್ಚಿನ್ ಕನ್ನಡ ಸಂಸ್ಕøತಿ ಉತ್ಸವ, ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ-ಆಮಂತ್ರಣಪತ್ರಿಕೆ ಬಿಡುಗಡೆ
0
ಏಪ್ರಿಲ್ 14, 2023