ಕಾಸರಗೋಡು : ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆ ನಿಲ್ಲಿಸುವುದಾಗಿ ಘೋಷಿಸಿದ್ದ ಎಡರಂಗ ಸರಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹೊರಿಸಿ ವಂಚಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ತಿಳಿಸಿದ್ದಾರೆ.
ಅವರು ಪೆಟ್ರೋಲ್, ಡೀಸೆಲ್ ಮೇಲೆ 2 ರೂಪಾಯಿ ಹೆಚ್ಚಿನ ಸೆಸ್ ವಿಧಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಸರಗೋಡು ನಗರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬೆಲೆ ಏರಿಕೆ ಎಲ್ಲಾ ಕ್ಷೇತ್ರಗಳಿಗೂ ವ್ಯಾಪಿಸಿದ್ದು, ಜನಸಾಮಾಣ್ಯರ ಜೀವನ ದುಸ್ತರವಾಗಿದೆ. ಸರ್ಕಾರ ಮತ್ತೆ ತೆರಿಗೆ ಹೆಚ್ಚಳಗೊಳಿಸಿರುವುದರಿಂದಬಡಜನತೆಗೆ ದುಪ್ಪಟ್ಟು ಹೊರೆಯಾಗಿದೆ ಎಂದು ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ರೈ, ಕಾರ್ಯದರ್ಶಿಗಳಾದ ಉಮಾ ಕಡಪ್ಪುರ, ಮನುಲಾಲ್ ಮೇಲತ್, ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಯುವ ಮೋರ್ಚಾ ರಾಜ್ಯ ಸಮಿತಿ ಉಪಾಧ್ಯಕ್ಷೆ ಅಂಜು ಜೋಸ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ, ಸಂಪತ್ ಕುಮಾರ್ ಉಪಸ್ಥಿತರಿದ್ದರು.
ಧರಣಿಗೆ ಮೊದಲು ಕರಂದಕ್ಕಾಡಿನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಹೊಸ ಬಸ್ ನಿಲ್ದಾಣದಲ್ಲಿ ಸಮಾರೋಪಗೊಂಡಿತು.
ಬಡಜನತೆಗೆ ಹೊರೆಯಾಗುತ್ತಿರುವ ಸೆಸ್-ಜನರನ್ನು ವಂಚಿಸುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
0
ಏಪ್ರಿಲ್ 06, 2023