ಜಾರ್ಖಂಡ್ (PTI): ಛತ್ರಾ ಜಿಲ್ಲೆಯ ಲಲಾಂಗ್ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ಮಧ್ಯೆ ಸೋಮವಾರ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.
ರಾಜಧಾನಿ ರಾಂಚಿಯಿಂದ 160 ಕಿ.ಮೀ ದೂರದಲ್ಲಿರುವ ಲಾಲಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರಾ-ಪಲಮು ಗಡಿಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ.ಘಟನೆಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.