ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ಸಮನ್ಸ್ ಸ್ವೀಕರಿಸಿದ ಒಂದು ದಿನದ ನಂತರ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್(Satya Pal Malik) ಅವರು ದಿಲ್ಲಿಯ ಆರ್‌ಕೆ ಪುರಂನಲ್ಲಿರುವ ಪೊಲೀಸ್ ಠಾಣೆಗೆ ಶನಿವಾರ ಭೇಟಿ ನೀಡಿದರು.
ಮಲಿಕ್ ರನ್ನು ಬಂಧಿಸಲಾಗಿದೆ ಎಂಬ ವರದಿಗಳನ್ನು ದಿಲ್ಲಿ ಪೊಲೀಸರು ದೃಢವಾಗಿ ಅಲ್ಲಗಳೆದರು. ಮಲಿಕ್ ಅವರು "ಸ್ವಂತ ಇಚ್ಛೆಯಿಂದ" ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ಹೇಳಿಕೆ ನೀಡಿದರು.
"ನಾವು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬಂಧಿಸಿಲ್ಲ, ಅವರು ತಮ್ಮ ಇಚ್ಛೆಯ ಮೇರೆಗೆ ತಮ್ಮ ಬೆಂಬಲಿಗರೊಂದಿಗೆ ಆರ್‌ಕೆ ಪುರಂ ಪೊಲೀಸ್ ಠಾಣೆಗೆ ಬಂದಿದ್ದಾರೆ ಮತ್ತು ಅವರು ತಮ್ಮ ಸ್ವಂತ ಇಚ್ಛೆಯ ಮೇರೆಗೆ ಹೋಗಬಹುದು ಎಂದು ನಾವು ಅವರಿಗೆ ತಿಳಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆ ನೀಡಿದ್ದಾರೆ.
ಮೂಲಗಳ ಪ್ರಕಾರ, ಪೊಲೀಸರು ಮಲಿಕ್ ಅವರ ಮನೆಗೆ ಭೇಟಿ ಸಭೆಗೆ ಬಂದಿದ್ದ ರೈತ ಸಂಘಟನೆಗಳು ಹಾಗೂ ಗ್ರಾಮ ಸಂಸ್ಥೆಗಳ ಮುಖಂಡರನ್ನು ಕರೆದೊಯ್ದ ಮಲಿಕ್ ಪೊಲೀಸ್ ಠಾಣೆಗೆ ಭೇಟಿ ನೀಡಿದರು