ಮಂಜೇಶ್ವರ: ಬಡಾಜೆ ಶಾಲೆಯ ಶತಮಾನೋತ್ಸವದ ಅಂಗವಾಗಿ ತಿಂಗಳಿಗೊಂದು ಕಾರ್ಯಕ್ರಮದ ಪ್ರಯುಕ್ತ ಶಾಲಾ ಶತಮಾನೋತ್ಸವ ಸಮಿತಿಯ ನೇತೃತ್ವದಲ್ಲಿ ಫ್ರೆಂಡ್ಸ್ ಸರ್ಕಲ್ ಚೌಕಿ ಬಡಾಜೆ ಕ್ಲಬ್ ನ ಸಹಬಾಗಿತ್ವದಲ್ಲಿ ಇಫ್ತಾರ್ ಸಂಗಮ ಕಾರ್ಯಕ್ರಮ ಬಡಾಜೆ ಶಾಲೆಯಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಜೇಶ್ವರ ಗ್ರಾಮ ಪಂಚಾಯತಿ ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷ ಯಾದವ ಬಡಾಜೆ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾವತಿ ಶುಭ ಹಾರೈಸಿದರು. ಶತಮಾನೋತ್ಸವ ಸಮಿತಿಯ ಸಂಚಾಲಕ ಕಬೀರ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಖಲೀಲ್, ಯಾಕೂಬ್, ಶೈಲಶ್ರೀ ಟೀಚರ್, ವಿನೋದ್, ಬಶೀರ್, ಕೌಶರ್, ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು. ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.