ಅಹಮದಾಬಾದ್: 2002ರ ಗುಜರಾತ್ ಹತ್ಯಾಕಾಂಡದ ವೇಳೆ ನಡೆದ ನರೋಡಾ ಗಾಂವ್ ಪ್ರಕರಣದಲ್ಲಿ ಗುಜರಾತ್‌ನ ಮಾಜಿ ಸಚಿವೆ ಮತ್ತು ಬಿಜೆಪಿ ನಾಯಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಬಾಬು ಬಜರಂಗಿ ಸೇರಿದಂತೆ 60 ಕ್ಕೂ ಹೆಚ್ಚು ಆರೋಪಿಗಳು ಖುಲಾಸೆಗೊಂಡಿದ್ದಾರೆ.
ಅಹಮದಾಬಾದ್‌ನ ನರೋಡಾಗಾಂವ್ನಲ್ಲಿ ಮುಸ್ಲಿಮರ ಮನೆಗಳಿಗೆ ಬೆಂಕಿ ಹಚ್ಚಿ 11 ಮುಸ್ಲಿಮರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್‌ನ ವಿಶೇಷ ನ್ಯಾಯಾಲಯವು ಇಂದು ತೀರ್ಪು ನೀಡಿದೆ.
2002 ರಹತ್ಯಾಕಾಂಡ ವೇಳೆ ನರೇಂದ್ರ ಮೋದಿ ಸರ್ಕಾರದ ಸಚಿವೆಯಾಗಿದ್ದ ಮಾಯಾ ಕೊಡ್ನಾನಿ ಪರವಾಗಿ ಗೃಹ ಸಚಿವ ಅಮಿತ್ ಶಾ ಅವರು 2017 ರಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
"ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ತೀರ್ಪಿನ ಪ್ರತಿಗಾಗಿ ನಾವು ಕಾಯುತ್ತಿದ್ದೇವೆ" ಎಂದು ಆರೋಪಿಗಳ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.
97 ಜನರನ್ನು ಕಗ್ಗೊಲೆ ಮಾಡಿದ ನರೋಡಾ ಪಾಟಿಯಾ ಗಲಭೆ ಪ್ರಕರಣದಲ್ಲಿಯೂ ಮಾಯಾ ಕೊಡ್ನಾನಿಯನ್ನು ದೋಷಿ ಎಂದು ಘೋಷಿಸಿ, ಅವರಿಗೆ 28 ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ನಂತರ ಆಕೆಯನ್ನು ಗುಜರಾತ್ ಹೈಕೋರ್ಟ್ ಬಿಡುಗಡೆಗೊಳಿಸಿತ್ತು.