ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿಮಾಡಿದೆ. ಏಪ್ರಿಲ್ 16 ಭಾನುವಾರ ಸರಿಯಾಗಿ 11 ಗಂಟೆಗೆ ಸಿಬಿಐನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಇದೀಗ ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.
ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡುವ ಸಲುವಾಗಿ ದೆಹಲಿ ಸರ್ಕಾರ 'ಅಬಕಾರಿ ನೀತಿ 2020-22' ಅನ್ನು ಜಾರಿಗೊಳಿಸಿದ್ದು, ಇದರಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು.ಈ ಆರೋಪವನ್ನು ಆಪ್ ಸರ್ಕಾರ ಬಲವಾಗಿ ವಿರೋಧಿಸಿತ್ತು.ನಂತರ ಈ ನೀತಿಯನ್ನು ರದ್ದುಗೊಳಿಸಲಾಗಿತ್ತು. ನಮ್ಮ ಸರ್ಕಾರದ ಅಭಿವೃದ್ದಿ ಕೆಲಸಗಳನ್ನು ಕಂಡು ತಾಳಲಾರದೆ ಕೇಂದ್ರ ಬಿಜೆಪಿ ಸರ್ಕಾರ ಆಪ್ ನಾಯಕರನ್ನು ಜೈಲಿಗಟ್ಟಿದೆ ಎಂದು ಆಪ್ ಆರೋಪಿಸಿದೆ.