ನವದೆಹಲಿ: ಚುನಾವಣಾ ಆಯುಕ್ತರಾಗಿ ಅರುಣ ಗೋಯೆಲ್ ನೇಮಕಾತಿಯನ್ನು ಪ್ರಶ್ನಿಸಿ ಎನ್ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದೆ. ಇದು ನಿರಂಕುಶ ಕ್ರಮವಾಗಿದೆ ಮತ್ತು ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆ ಮತ್ತು ಸ್ವಾತಂತ್ರದ ಉಲ್ಲಂಘನೆಯಾಗಿದೆ ಎಂದು ಅದು ಪ್ರತಿಪಾದಿಸಿದೆ.