ಕಾಸರಗೋಡು: ರಾಜ್ಯದ ಎಲ್ಲ ಜನರಿಗೆ ಉತ್ತಮ ಚಿಕಿತ್ಸೆ ನೀಡುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು. ನವ ಕೇರಳ ಕ್ರಿಯಾ ಯೋಜನೆ, ಆದ್ರ್ರಂ ಮಿಷನ್‍ನ ಎರಡನೇ ಹಂತದ ಅಂಗವಾಗಿ ನವೀಕೃತ ಕುಟುಂಬ ಆರೋಗ್ಯ ಕೇಂದ್ರಗಳನ್ನು ಆನ್‍ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕೇರಳದಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕುಟುಂಬ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸುವುದು ಗುರಿಯಾಗಿದೆ. ಕುಟುಂಬ ಆರೋಗ್ಯ ಕೇಂದ್ರವು ವಿಶಾಲ ಪರಿಕಲ್ಪನೆಯ ಸಂಕ್ಷಿಪ್ತ ರೂಪವಾಗಿದೆ. ಸಂಸ್ಥೆ ಮತ್ತು ಸಂಸ್ಥೆಯಲ್ಲಿರುವ ವೈದ್ಯರಿಗೆ ಪ್ರತಿ ಹಳ್ಳಿಯ ಸಂಪರ್ಕ ಕಲ್ಪಿಸಬೇಕು. ಎಲ್ಲಾ ಇತರ ಯೋಜನೆಯಂತೆ ಆದ್ರ್ರಂ ಮಿಷನ್ ಕೂಡ ಬೃಹತ್ ಸಮುದಾಯದ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸುತ್ತದೆ. ನಮ್ಮ ದೇಶದ ಎಲ್ಲಾ ಜನರಿಗೆ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ನಿರ್ಧಾರದಿಂದ ಸಾಧ್ಯವಾಗಿದ್ದು, ಇದರಿಂದ ಕೋವಿಡ್ ಹರಡುವುದನ್ನು ತಪ್ಪಿಸಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿ ಹೇಳಿದರು.
ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ವಿನ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ಪಳ್ಳಿಕ್ಕರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕುಮಾರನ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಕುಞÂರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷೆ ನಾಸ್ನಿನ್ ವಹಾಬ್, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮಣಿಕಂದನ್, ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಸೂರಜ್, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ವಿ. ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು.
ಮಧೂರು ಕುಟುಂಬ ಆರೋಗ್ಯ ಕೇಂದ್ರ:
ಮಧೂರು ಕುಟುಂಬ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎನ್.ಎ.ನೆಲ್ಲಿಕುನ್ನು, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷಕೆ. ಗೋಪಾಲಕೃಷ್ಣ, ಮಧೂರು ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಗಟ್ಟಿ, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಸುಕುಮಾರ ಕುದ್ರೆಪ್ಪಾಡಿ, ಮಧೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಉಪಸ್ಥಿತರಿದ್ದರು. ಕುಂಬಳೆ ಸಾಮಾಜಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದಿವಾಕರ ರೈ ಸ್ವಾಗತಿಸಿದರು. ಕುಟುಂಬ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ರಾಬಿನ್ಸನ್ ವಂದಿಸಿದರು.
ರಾಜ್ಯದ ಜನತೆಗೆ ಉತ್ತಮ ಚಿಕಿತ್ಸೆ ಸರ್ಕಾರದ ಪ್ರಮುಖ ಧ್ಯೇಯ-ಕುಟುಮಬ ಆರೋಗ್ಯ ಕೇಂದ್ರಗಳ ಉದ್ಘಾಟಿಸಿ ಸಿಎಂ ಪಿಣರಾಯಿ ವಿಜಯನ್ ಅಭಿಪ್ರಾಯ
0
ಏಪ್ರಿಲ್ 18, 2023
Tags