ನವದೆಹಲಿ: ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಮತ್ತೆ ದಿಢೀರ್ ಏರುಗತಿಗೆ ಹೊರಳಿದ್ದು, ಬುಧವಾರ 4,435 ಹೊಸ ಪ್ರಕರಣಗಳು ವರದಿಯಾಗಿವೆ. 15 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, 163 ದಿನಗಳಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದೆ.