ನವದೆಹಲಿ: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿಯ ವಕ್ತಾರರು ತಿಳಿಸಿದ್ಧಾರೆ.
ಮೇ ತಿಂಗಳಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಶೃಂಗ ಸಭೆ(SCO)ಯಲ್ಲಿ ಭಾಗವಹಿಸಲು ಭುಟ್ಟೋ ಭಾರತಕ್ಕೆ ಭೇಟಿ ನೀಡಲಿದ್ಧಾರೆ ಎಂದು ತಿಳಿದು ಬಂದಿದೆ.
ಪಾಕಿಸ್ತಾನ ವಿದೇಶಾಂಗ ಸಚಿವರಾದ ಬಿಲಾವಲ್ ಭುಟ್ಟೋ ಜರ್ದಾರಿ ಭಾರತದ ಗೋವಾದಲ್ಲಿ ನಡೆಯಲಿರುವ ಶಾಂಘೈ ಶೃಂಗ ಸಭೆಯಲ್ಲಿ ಮೇ 4-5ರಂದು ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ನಮ್ಮ ದೇಶದ ಪ್ರತಿನಿಧಿ ಭಾಗಿಯಾಗುವುದರಿಂದ SCO ಬಗ್ಗೆ ಪಾಕಿಸ್ತಾನಕ್ಕೆ
ಇರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ
ಮುಮ್ತಾಜ್ ಜಹ್ರಾ ಬಲೋಚ್ ತಿಳಿಸಿದ್ದಾರೆ.
2014ರಲ್ಲಿ ಪಾಕಿಸ್ತಾನದ ಅಂದಿನ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಭೇಟಿ ಬಳಿಕ ಯಾವ ನಾಯಕರು ಭಾರತಕ್ಕೆ ಭೇಟಿ ನೀಡಿರಲಿಲ್ಲ.