ಕಾಸರಗೋಡು: ಪೆರಿಯಾ ಜವಾಹರ್ ನವೋದಯ ವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದ ಹನ್ನೊಂದನೇ ತರಗತಿಯಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು www.navodaya.gov.in ಎಂಬ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಮೇ 31ಕೊನೆಯ ದಿನಾಂಕವಾಗಿದ್ದು, ಅರ್ಜಿದಾರರು ಜಿಲ್ಲೆಯಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಯಾ ಸರ್ಕಾರಿ ಮಾನ್ಯತೆ ಪಡೆದ ಶಾಲೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಜೂನ್ 1, 2006 ರಿಂದ ಜುಲೈ 31, 2008 ರ ನಡುವೆ ಜನಿಸಿದವರಾಗಿರಬೇಕುರೀ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(0467 2234057, 8921080165)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.