ನವದೆಹಲಿ: ದೇಶದಲ್ಲಿನ 19.44 ಕೋಟಿ ಗ್ರಾಮೀಣ ಕುಟುಂಬಗಳ ಪೈಕಿ 12 ಕೋಟಿ ಕುಟುಂಬಗಳಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ ಎಂದು ಕೇಂದ್ರದ ಅಧಿಕೃತ ಮಾಹಿತಿಗಳು ತಿಳಿಸಿವೆ.
ನವದೆಹಲಿ: ದೇಶದಲ್ಲಿನ 19.44 ಕೋಟಿ ಗ್ರಾಮೀಣ ಕುಟುಂಬಗಳ ಪೈಕಿ 12 ಕೋಟಿ ಕುಟುಂಬಗಳಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ ಎಂದು ಕೇಂದ್ರದ ಅಧಿಕೃತ ಮಾಹಿತಿಗಳು ತಿಳಿಸಿವೆ.
ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಒಂಬತ್ತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಶೇಕಡ 50ರಷ್ಟು ಗ್ರಾಮೀಣ ಕುಟುಂಬಗಳು ಈ ಸೌಲಭ್ಯವನ್ನು ಪಡೆದುಕೊಂಡಿವೆ.
2024ರ ವೇಳೆಗೆ ಈ ಯೋಜನೆಯ ಅಡಿಯಲ್ಲಿ ದೇಶದ ಎಲ್ಲಾ ಗ್ರಾಮೀಣ ಕುಟುಂಬಗಳಿಗೂ ನಲ್ಲಿ ನೀರಿನ ಸಂಪರ್ಕ ಒದಗಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಇದುವರೆಗೆ ದೇಶದಾದ್ಯಂತ 9,06,846 ಶಾಲೆಗಳು, 9,39,909 ಅಂಗನವಾಡಿಗಳು ಹಾಗೂ 3,87,148 ಲಕ್ಷ ಗ್ರಾಮ ಪಂಚಾಯಿತಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ನಲ್ಲಿ ನೀರಿನ ಸೌಲಭ್ಯವನ್ನು ಒದಗಿಸಲಾಗಿದೆ.
ಮೇಘಾಲಯದ ಶಾಲೆಗಳು ಶೇಕಡ 57 ರಷ್ಟು ನಲ್ಲಿ ನೀರಿನ ಸೌಲಭ್ಯವನ್ನು ಪಡೆದುಕೊಳ್ಳುವ ಮೂಲಕ ದೇಶದಲ್ಲಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಡಿಮೆ ನಲ್ಲಿ ನೀರಿನ ಸಂಪರ್ಕ ಪಡೆದುಕೊಂಡಿರುವ ರಾಜ್ಯವಾಗಿದೆ.