ನವದೆಹಲಿ: ವಿವಾದಿತ 'ಕೇರಳ ಸ್ಟೋರಿ' ಬಹುಭಾಷೆಯ ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿರುವ ಅರ್ಜಿಯನ್ನು ಮೇ 15ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.
ನವದೆಹಲಿ: ವಿವಾದಿತ 'ಕೇರಳ ಸ್ಟೋರಿ' ಬಹುಭಾಷೆಯ ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿರುವ ಅರ್ಜಿಯನ್ನು ಮೇ 15ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ಪೀಠದ ಎದುರು, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಈ ಅರ್ಜಿ ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದರು.
ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ನೀಡಿದೆಯೇ ಎಂದು ಪೀಠವು ಪ್ರಶ್ನಿಸಿದಾಗ, ಕಪಿಲ್ ಸಿಬಲ್ ಅವರು, ಚಿತ್ರ ಬಿಡುಗಡೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ ಎಂದು ಮಾಹಿತಿ ನೀಡಿದರು. ಆಗ ಸಿಜಿಐ ನೇತೃತ್ವದ ಪೀಠವು, ಈ ಅರ್ಜಿಯನ್ನು ಮೇ 15ರಂದು ವಿಚಾರಣೆಗೆ ಪಟ್ಟಿ ಮಾಡಿಸಿತು.
ಚಿತ್ರದ ಟೀಸರ್ ಮತ್ತು ಟ್ರೇಲರ್ ವೀಕ್ಷಿಸಿದ ನಂತರ ಕೇರಳ ಹೈಕೋರ್ಟ್, ಮೇ 5ರಂದು ಚಿತ್ರ ಬಿಡುಗಡೆಗೆ ತಡೆ ನೀಡಲು ಮತ್ತು ಟ್ರೈಲರ್ ಮತ್ತಿತರ ದೃಶ್ಯಗಳನ್ನು ತೆಗೆದುಹಾಕಲು ನಿರ್ದೇಶನ ನೀಡಲು ನಿರಾಕರಿಸಿತ್ತು.'ಇಸ್ಲಾಂ ಅಥವಾ ಮುಸ್ಲಿಮರ ವಿರುದ್ಧವಾದಂತಹ ಅಂಶಗಳು ಇದರಲ್ಲಿ ಇಲ್ಲ. ಬದಲಿಗೆ ಇದು ಭಯೋತ್ಪಾದಕ ಐಎಸ್‌ಐಎಸ್ ಸಂಘಟನೆಗೆ ಸಂಬಂಧಿಸಿದ್ದಾಗಿದೆ' ಎಂಬ ವಾದವನ್ನೂ ಹೈಕೋರ್ಟ್ ಮಾನ್ಯ ಮಾಡಿತ್ತು.