ಶ್ರೀನಗರ: ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಪ್ರತ್ಯೇಕತಾವಾದಿಗಳು ಮತ್ತು ಉಗ್ರಗಾಮಿಗಳ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ 15 ಸ್ಥಳಗಳಲ್ಲಿ ದಾಳಿ ನಡೆಸಿತು.
ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸಿಪಿಆರ್‌ಎಫ್‌ನ ಸಹಕಾರದೊಂದಿಗೆ ಎನ್‌ಐಎ ಪಡೆ ಕಾಶ್ಮೀರದ ಶ್ರೀನಗರ, ಶೋಪಿಯಾನ್, ಕುಲ್ಗಾಮ್, ಬುದ್ಗಾಮ್, ಬರಮುಲ್ಲಾ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಹಾಗೂ ಜಮ್ಮುವಿನ ಪೂನಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ದಾಳಿ ನಡೆಸಿತು.
2022ರಲ್ಲಿ ದಾಖಲಾದ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಸಂಬಂಧ ಹೊಂದಿರುವವರಿಗಾಗಿ ಮೇ 2ರಂದು ಎನ್‌ಐಎ ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಧ ನಡೆಸಿತು.