ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 19ರಿಂದ 24ರ ವರೆಗೆ ಜಪಾನ್, ಪಪುವಾ ನ್ಯೂ ಗಿನಿ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 19ರಿಂದ 24ರ ವರೆಗೆ ಜಪಾನ್, ಪಪುವಾ ನ್ಯೂ ಗಿನಿ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.
ಜಿ-7 ಸಮಾವೇಶದಲ್ಲಿ ಪಾಲ್ಗೊಳ್ಳಲು ಮೇ 19ರಿಂದ 21ರ ವರೆಗೆ ಜಪಾನ್‌ನ ಹಿರೋಶಿಮಾದಲ್ಲಿ ಇರಲಿದ್ದಾರೆ.
'ಪ್ರಧಾನಿ ಮೋದಿ ಅವರು, ಶಾಂತಿ, ಸ್ಥಿರತೆ ಮತ್ತು ಆಹಾರ, ರಸಗೊಬ್ಬರ, ಇಂಧನ ಭದ್ರತೆ ಕುರಿತು ಜಿ-7 ಸಮಾವೇಶದಲ್ಲಿ ಪಾಲುದಾರ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ' ಎಂದು ತಿಳಿಸಿದೆ.
'ಮೇ 22ರಂದು ಪಪುವಾ ನ್ಯೂ ಗಿನಿಗೆ ತೆರಳಲಿದ್ದಾರೆ. ನಂತರ ಮೇ 22ರಿಂದ 24ರ ವರೆಗೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯಲಿರುವ ಕ್ವಾಡ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಯಂಟನಿ ಅಲ್ಬನೆಸ್, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.