ತಿರುವನಂತಪುರಂ: ಕೆಎಸ್‍ಆರ್‍ಟಿಸಿ ಬಸ್‍ಗಳು ಮತ್ತು ಟಿಕೆಟ್ ಕೌಂಟರ್‍ಗಳು ಇನ್ನು ಮುಂದೆ ರಾಜ್ಯದಲ್ಲಿ 2000 ರೂಪಾಯಿ ನೋಟುಗಳನ್ನು ಸ್ವೀಕರಿಸುವುದಿಲ್ಲ.
ಈ ಬಗ್ಗೆ ನಿಗಮವು ಕಂಡಕ್ಟರ್‍ಗಳು ಮತ್ತು ಟಿಕೆಟ್ ಕೌಂಟರ್ ಸಿಬ್ಬಂದಿಗೆ ಸೂಚನೆಗಳನ್ನು ನೀಡಿದೆ. ಮೊನ್ನೆ ರಾಜ್ಯದ ಬಿವರೇಜ್ ನಿಗಮಗಳಿಗೆ ರೂ.2000 ಸ್ವೀಕರಿಸದಂತೆ ಸೂಚನೆ ನೀಡಲಾಗಿತ್ತು.
ಇತ್ತೀಚೆಗೆ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳ ಚಲಾವಣೆ ಸ್ಥಗಿತಗೊಳಿಸುವುದಾಗಿ ಘೋಷಿಸಿತ್ತು. 2000 ರೂಪಾಯಿ ನೋಟುಗಳನ್ನು ಸೆಪ್ಟೆಂಬರ್ 30 ರವರೆಗೆ ಬ್ಯಾಂಕ್‍ನಲ್ಲಿ ಠೇವಣಿ ಮಾಡಬಹುದು ಅಥವಾ ಬದಲಾಯಿಸಬಹುದು.
ಈ ಸಂದರ್ಭದಲ್ಲಿ 2000 ರೂ.ಗಳ ನೋಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಗಳು ಮತ್ತು ಟಿಕೆಟ್ ಕೌಂಟರ್ ಗಳಿಗೆ ತಲುಪುವ ಸಾಧ್ಯತೆಯ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ ಎಂದು ತಿಳಿದುಬಂದಿದೆ.