ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಯ ಹಿನ್ನೆಲೆಯಲ್ಲಿ ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ವಿಷೇಶ ಸಭೆ ಕರೆದಿದೆ.
ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಯ ಹಿನ್ನೆಲೆಯಲ್ಲಿ ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ವಿಷೇಶ ಸಭೆ ಕರೆದಿದೆ.
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ತೆಲಂಗಾಣ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತೆಲಂಗಾಣ ರಾಜ್ಯ ಹೊರತುಪಡಿಸಿದರೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮಧ್ಯಪ್ರದೇಶ ಮತ್ತು ಛತ್ತೀಸಗಢದಲ್ಲಿ ಪ್ರಬಲ ವಿರೋಧ ಪಕ್ಷವಾಗಿದೆ.
ಕಳೆದ ಡಿಸೆಂಬರ್‌ನಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವುದ ದಾಖಲಿಸಿ ಅಧಿಕಾರ ಹಿಡಿದಿದೆ.