ಗುವಾಹಟಿ: ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹25 ಲಕ್ಷ ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಖಚಿತ ಮಾಹಿತಿ ಆಧಾರದ ಮೇಲೆ ನಾವು ಪೈಕಾನ್ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5,075 ಕೆಮ್ಮಿನ ಸಿರಪ್ ಬಾಟಲಿಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಕೆಮ್ಮಿನ ಸಿರಪ್ ಬಾಟಲಿಗಳ ಮಾರುಕಟ್ಟೆ ಮೌಲ್ಯ ಸುಮಾರು ₹25 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಗೋಲ್‌ಪಾರಾ ಜಿಲ್ಲೆಯ ಪೊಲೀಸ್ ಉಪ ಅಧೀಕ್ಷಕ ಅನುರಾಗ್ ಶರ್ಮಾ ಮಾಹಿತಿ ನೀಡಿದ್ದಾರೆ.
ಕೆಮ್ಮಿನ ಸಿರಪ್ ಬಾಟಲಿಗಳನ್ನು ತುಂಬಿದ್ದ ವಾಹನ ಮೇಘಾಲಯದ ತುರಾ ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಮ್ಮಿನ ಸಿರಪ್ ಬಾಟಲಿಗಳು ಯಾವ ಕಂಪನಿಗೆ ಸೇರಿದ್ದು ಎಂಬ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ.