ನವದೆಹಲಿ: ನೂತನ ಸಂಸತ್ ಭವನ ಮೇ 28ಕ್ಕೆ ಲೋಕಾರ್ಪಣೆಯಾಗಲಿದೆ ಎಂದು ಲೋಕಸಭೆ ಕಾರ್ಯಾಲಯ ಮಾಹಿತಿ ನೀಡಿದೆ.
ನವದೆಹಲಿ: ನೂತನ ಸಂಸತ್ ಭವನ ಮೇ 28ಕ್ಕೆ ಲೋಕಾರ್ಪಣೆಯಾಗಲಿದೆ ಎಂದು ಲೋಕಸಭೆ ಕಾರ್ಯಾಲಯ ಮಾಹಿತಿ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನವನ್ನು ದೇಶಕ್ಕೆ ಸಮರ್ಪಿಸುವರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಕಟ್ಟಡ ಉದ್ಘಾಟನೆಗೆ ಆಹ್ವಾನಿಸಿದರು.
ಸಂಸತ್ ಭವನ ಕಾಮಗಾರಿ ಪೂರ್ಣಗೊಂಡಿದ್ದು, ಹೊಸ ಕಟ್ಟಡ ಸ್ವಾವಲಂಬಿ ಭಾರತದ ಪ್ರತೀಕ ಎಂದು ಲೋಕಸಭೆ ಸಚಿವಾಲಯ ಹೇಳಿದೆ.