ನವದೆಹಲಿ: ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಲಿದ್ದಾರೆ.
ಹೊಸ ಸಂಸತ್ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು ಕಟ್ಟಡವು ಸ್ವಾವಲಂಬಿ ಭಾರತದ (ಆತ್ಮನಿರ್ಭರ ಭಾರತ್)ಸಂಕೇತವಾಗಿದೆ ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.
ಲೋಕಸಭೆಯಲ್ಲಿ 888 ಸದಸ್ಯರಿಗೆ ಅವಕಾಶ ಕಲ್ಪಿಸಲು ಸಾಕಷ್ಟು ಸ್ಥಳಾವಕಾಶವಿರುವ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ಆಹ್ವಾನಿಸಿದ್ದಾರೆ. ಅಸ್ತಿತ್ವದಲ್ಲಿರುವ ಸಂಸತ್ ಭವನ ಲೋಕಸಭೆಯ 543 ಮತ್ತು ರಾಜ್ಯಸಭೆಯಲ್ಲಿ 250 ಸದಸ್ಯರನ್ನು ಕುಳಿತುಕೊಳ್ಳಲು ಮಾತ್ರ ಅವಕಾಶ ಹೊಂದಿದೆ. ಭವಿಷ್ಯದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸದಾಗಿ ನಿರ್ಮಿಸಲಾಗಿರುವ ಕಟ್ಟಡದಲ್ಲಿ ಲೋಕಸಭೆಯ 888 ಮತ್ತು ರಾಜ್ಯಸಭೆಯ 384 ಸದಸ್ಯರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಲೋಕಸಭೆಯ ಸಭಾಂಗಣದಲ್ಲಿ ಉಭಯ ಸದನಗಳ ಜಂಟಿ ಅಧಿವೇಶನ ನಡೆಯಲಿದೆ. ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2020 ರಲ್ಲಿ ಈ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್ಲೈನ್ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.