ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಾದ್ಯಂತ ₹36 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿಗಳನ್ನು ಹಾಗೂ ಉದಯನಿಧಿ ಸ್ಟಾಲಿನ್ ಫೌಂಡೇಶನ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹34.7 ಲಕ್ಷವನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಹೇಳಿದೆ.

ಕಲ್ಲಾಲ್ ಸಮೂಹ, ಬ್ರಿಟನ್ ಮೂಲದ ಲೈಕಾ ಸಮೂಹ ಸಂಸ್ಥೆಗಳು ಮತ್ತು ಲೈಕಾ ಚಿತ್ರ ನಿರ್ಮಾಣ ಸಂಸ್ಥೆಯ ಭಾರತದಲ್ಲಿರುವ ಕಂಪನಿಗಳು ಮತ್ತು ಲೈಕಾ ಹೋಟೆಲ್‌ಗಳ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ನಡೆದಿದ್ದು, ಈ ಸಂಸ್ಥೆಗಳಲ್ಲಿ ಇ.ಡಿ ಈಚೆಗೆ ಶೋಧ ಕಾರ್ಯಾಚರಣೆ ನಡೆಸಿತ್ತು.
ಚೆನ್ನೈನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ದಾಖಲಿಸಿದ್ದ ಎಫ್‌ಐಆರ್‌ನ ಆಧಾರದಲ್ಲಿ ತನಿಖೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆಯ ವೇಳೆ ಡಿಜಿಟಲ್ ಸಾಕ್ಷ್ಯ, ನಗದು, ಹವಾಲ ವ್ಯವಹಾರಗಳಿಗೆ ಸಂಬಂಧಿಸಿದ ಸಾಕ್ಷ್ಯಗಳು ಲಭಿಸಿವೆ ಎಂದು ಇ.ಡಿ ಹೇಳಿಕೆಯಲ್ಲಿ ತಿಳಿಸಿದೆ.
ಲೈಕಾ ಸಂಸ್ಥೆಯು ತಮಿಳಿನ 'ಪೊನ್ನಿಯನ್ ಸೆಲ್ವನ್' ಸಿನಿಮಾ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿದೆ.