ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ತಿಂಗಳ 30 ರಂದು 10 ದಿನಗಳ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಜೂನ್ 4 ರಂದು ರಾಹುಲ್ ಗಾಂಧಿ ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ರ್ಯಾಲಿ ನಡೆಸಲಿದ್ದಾರೆ. ಇದರಲ್ಲಿ ಸುಮಾರು 5,000 ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಇದಲ್ಲದೆ, ಅವರು ಪ್ಯಾನೆಲ್ ಡಿಸ್ಕಶನ್ ಗಾಗಿ ವಾಷಿಂಗ್ಟನ್ ಹಾಗೂ ಕ್ಯಾಲಿಫೋರ್ನಿಯಾಗೆ ಭೇಟಿ ನೀಡಲಿದ್ದಾರೆ. ಅಲ್ಲದೇ ಸ್ಟಾನ್ ಫೋರ್ಡ್ ವಿವಿಯಲ್ಲಿ ಭಾಷಣ ಮಾಡಲಿದ್ದಾರೆ. ರಾಜಕಾರಣಿಗಳು ಮತ್ತು ಉದ್ಯಮಿಗಳನ್ನು ಕೂಡಾ ರಾಹುಲ್ ಭೇಟಿಯಾಗಲಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜೂನ್ 22 ರಂದು ಅಮೆರಿಕಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಭೇಟಿ ವೇಳೆ ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರು ಶ್ವೇತಭವನದಲ್ಲಿ ಆತಿಥ್ಯ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಳೆದ ವಾರ ತಿಳಿಸಿತ್ತು.