ಮಲಪ್ಪುರ (PTI): ಇಲ್ಲಿನ ಕಕ್ಕಾಡ್ ಸಮೀಪ ಕಟ್ಟಡವೊಂದರಲ್ಲಿ ಭಾನುವಾರ ಅಗ್ನಿ ಅನಾಹುತ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಸುಮಾರು ₹ 4 ಕೋಟಿ ನಷ್ಟ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಪ್ಪುರ (PTI): ಇಲ್ಲಿನ ಕಕ್ಕಾಡ್ ಸಮೀಪ ಕಟ್ಟಡವೊಂದರಲ್ಲಿ ಭಾನುವಾರ ಅಗ್ನಿ ಅನಾಹುತ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಸುಮಾರು ₹ 4 ಕೋಟಿ ನಷ್ಟ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೈರ್, ಪೇಂಟ್, ವಾಹನದ ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿಗಳು ಸುಟ್ಟುಹೋಗಿವೆ ಎಂದೂ ವಿವರಿಸಿದ್ದಾರೆ.
ಅಂಗಡಿಯೊಂದರ ಹಿಂಭಾಗದಲ್ಲಿ ಮೊದಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಅದು ಉಳಿದ ಅಂಗಡಿಗಳಿಗೂ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮೊದಲಿಗೆ ಬೆಂಕಿ ಕಾಣಿಸಿಕೊಂಡ ಅಂಗಡಿಯ ಸಮೀಪ ಎಲೆಕ್ಟ್ರಿಕ್ ಸ್ಕೂಟರ್ ನಿಲ್ಲಿಸಲಾಗಿತ್ತು ಎಂದೂ ಹೇಳಿದ್ದಾರೆ.