HEALTH TIPS

ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯಿಂದ ಜನರ ಮನಸ್ಸು ಗೆದ್ದಿದ್ದು, 5 ಭರವಸೆಗಳನ್ನು ಈಡೇರಿಸುತ್ತೇವೆ: ರಾಹುಲ್ ಗಾಂಧಿ

           ನವದೆಹಲಿ: ನಾವು ಕರ್ನಾಟಕದ ಜನರ ಪರವಾಗಿ ನಿಂತಿದ್ದೇವೆ. ಬಡವರು ಕರ್ನಾಟಕದಲ್ಲಿ ಕ್ರೂರ ಬಂಡವಾಳಶಾಹಿಗಳನ್ನು ಸೋಲಿಸಿದ್ದಾರೆ. ನಾವು ದ್ವೇಷವನ್ನು ಬಳಸಿಕೊಂಡು ಈ ಯುದ್ಧವನ್ನು ಮಾಡಲಿಲ್ಲ. ಕರ್ನಾಟಕ ಚುನಾವಣೆಯಲ್ಲಿ ಪ್ರೀತಿ ಮತ್ತು ಸಹೋದರತ್ವದಿಂದ ಹೋರಾಡಿ ಗೆದ್ದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

               ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಗೆದ್ದು ಸರ್ಕಾರ ರಚಿಸಲು ಸನ್ನದ್ಧವಾಗಿದ್ದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಕೂಡ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ನಮ್ಮ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ. ಪ್ರೀತಿಯಿಂದ ಜನರನ್ನು ಗೆಲ್ಲಬಹುದು ಎಂದು ಇಂದಿನ ಚುನಾವಣೆ ಫಲಿತಾಂಶ ತೋರಿಸಿಕೊಟ್ಟಿದೆ.



                   ರಾಜ್ಯದ ಜನತೆಗೆ ನನ್ನ ಹೃದಯದಾಳದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕಕ್ಕೆ ನೀಡಿರುವ ಐದು ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.

             ಕರ್ನಾಟಕ ಚುನಾವಣೆಯಲ್ಲಿ ಬಹುಮತ ಸಿಗುತ್ತಿದ್ದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿಕೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries