ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ಮೇ.8ರಂದು ಬೆಳಗ್ಗೆ 10 ಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಚಿತ್ತೈಸಲಿದ್ದಾರೆ. ಅವರಿಗೆ ಪೂರ್ಣಕುಂಭ ಸ್ವಾಗತ, ಪಾದಪೂಜೆ ನಡೆಯಲಿದೆ. ನಂತರ ಅವರು ಆಶೀರ್ವಚನವನ್ನು ನೀಡಿ ಅನುಗ್ರಹಿಸಲಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.