ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಒಂದು ತಿಂಗಳು ವಿವಿಧ ಕಾರ್ಯಕ್ರಮ ಏರ್ಪಡಿಸಲು ಬಿಜೆಪಿ ನಿರ್ಧರಿಸಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಒಂದು ತಿಂಗಳು ವಿವಿಧ ಕಾರ್ಯಕ್ರಮ ಏರ್ಪಡಿಸಲು ಬಿಜೆಪಿ ನಿರ್ಧರಿಸಿದೆ.
ಕಳೆದ ಚುನಾವಣೆಯಲ್ಲಿ ಪಕ್ಷ ಸೋತಿದ್ದ 144 ಕ್ಷೇತ್ರಗಳಲ್ಲಿ ಈ ಅಭಿಯಾನದಲ್ಲಿ ಹೆಚ್ಚಿನ ಗಮನಹರಿಸಲಿದೆ. ರಾಜಸ್ಥಾನದ ಅಜ್ಮೇರ್‌ನಲ್ಲಿ ಬುಧವಾರ ರ‍್ಯಾಲಿ ಉದ್ದೇಶಿಸಿ ಮಾತನಾಡುವ ಮೂಲಕ ಸ್ವತಃ ಪ್ರಧಾನಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಮೇ 31 ರಿಂದ ಜೂನ್ 30ರವರೆಗೆ ಕಾರ್ಯಕ್ರಮಗಳು ನಡೆಯಲಿವೆ. ಲೋಕಸಭೆಯ ಎಲ್ಲ ಕ್ಷೇತ್ರಗಳ ವ್ಯಾಪ್ತಿಯಲ್ಲಿ 500ಕ್ಕೂ ಹೆಚ್ಚು ಸಭೆಗಳು, 600ಕ್ಕೂ ಹೆಚ್ಚು ಕಡೆ ಮುಖಂಡರಿಂದ ಪತ್ರಿಕಾಗೋಷ್ಠಿ ಆಯೋಜಿಸಲಿದ್ದೇವೆ ಎಂದು ಮುಖಂಡರು ತಿಳಿಸಿದರು.
ಅಭಿಯಾನಕ್ಕೆ ಪೂರಕವಾಗಿ ಲೋಕಸಭೆ ಕ್ಷೇತ್ರಗಳನ್ನು 144 ಕ್ಲಸ್ಟರ್‌ಗಳಾಗಿ ವಿಂಗಡಿಸಲಾಗಿದೆ. ಈ ಕ್ಲಸ್ಟರ್‌ಗಳ ವ್ಯಾಪ್ತಿಯಲ್ಲಿ 288 ಸಂಸದರು, ಹಿರಿಯ ಮುಖಂಡರು ಎಂಟು ದಿನ ಕಾಲ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
'9 ವರ್ಷಗಳಲ್ಲಿ ನಾವು ಏನು ಮಾಡಿದ್ದೇವೆ ಎಂಬ ಬಗ್ಗೆ ಜನರ ಗಮನಸೆಳೆಯುವುದು ಉದ್ದೇಶ. ಪ್ರಚಾರದ ವೇಗ ಹೆಚ್ಚಿಸುವುದು ಗುರಿ' ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದರು.
ಒಂದು ತಿಂಗಳ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ತರುಣ್ ಚುಗ್ ಅವರು ಸುದ್ದಿಗೋಷ್ಠಿಯಲ್ಲಿ, ಕಾರ್ಯಕ್ರಮಗಳು ಲೋಕಸಭೆ, ವಿಧಾನಸಭೆ ಕ್ಷೇತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಯಲಿವೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ವಿಧಾನಸಭೆಗಳ 4,000 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾರ್ಯಕರ್ತರು ಈ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದಾರೆ ಎಂದು ತಿಳಿಸಿದರು.
ನರೇಂದ್ರ ಮೋದಿ, ಪ್ರಧಾನಿನಾವು ಕೈಗೊಂಡ ನಿರ್ಧಾರ ಕಾರ್ಯಗತಗೊಳಿಸಿದ ಪ್ರತೀ ಕ್ರಿಯೆಯ ಹಿಂದೆ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶವಿತ್ತು. ದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಶ್ರಮವಹಿಸಿ ಕೆಲಸ ಮಾಡುವುದನ್ನು ನಾವು ಮುಂದುವರಿಸುತ್ತೇವೆ.