ನವದೆಹಲಿ: ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು 'ಪರಿಸರ ಅನುಮೋದನೆ' ವ್ಯಾಪ್ತಿಗೆ ಸೇರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್‌ಜಿಟಿ) ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಎನ್‌ಜಿಟಿಯ ಪ್ರಧಾನ ಪೀಠ ಅರ್ಜಿ ವಿಚಾರಣೆ ನಡೆಸಿತು. ಈ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಆಗಸ್ಟ್ 31ರೊಳಗೆ ವರದಿ ಸಲ್ಲಿಸುವಂತೆ ಸಚಿವಾಲಯಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 14ಕ್ಕೆ ಮುಂದೂಡಿತು.
ಕಸಾಯಿಖಾನೆಗಳಿಂದ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಪರಿಸರದ ಮೇಲಾಗುತ್ತಿರುವ ಪರಿಣಾಮಗಳ ಮೌಲ್ಯಮಾಪನ ಹಾಗೂ ನಿಯಂತ್ರಣಕ್ಕಾಗಿ ಸಮರ್ಪಕ ಚೌಕಟ್ಟು ಇಲ್ಲ ಎಂದು ಅರ್ಜಿ ಸಲ್ಲಿಸಲಾಗಿತ್ತು.
ಈ ವಿಷಯ ಕುರಿತು ಕ್ರಮ ಕೈಗೊಳ್ಳುವಂತೆ ಪರಿಸರ ಮತ್ತು ಅರಣ್ಯ ಸಚಿವಾಲಯ ನೇಮಿಸಿದ್ದ ತಜ್ಞರ ಸಮಿತಿ ಶಿಫಾರಸುಗಳನ್ನು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.