ವಯನಾಡ್: ಭಾರೀ ಮಳೆ ಮತ್ತು ಗಾಳಿಗೆ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಯನಾಡಿನಲ್ಲಿ ನಡೆದಿದೆ. ಬಸ್ ನಿಲ್ದಾಣದ ಮೇಲೆ ತೆಂಗಿನ ಮರ ಬಿದ್ದು ವಿದ್ಯಾರ್ಥಿ ಗಾಯಗೊಂಡಿದ್ದಾನೆ.
ಕಲ್ಪಟ್ಟಾದ ಪುಲಿಯಾರ್ ಮಾಳ ಐಟಿಐ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಕಟ್ಟಿಕುಳಂನ ಐಟಿಐ ವಿದ್ಯಾರ್ಥಿ ನಂದು ಗಂಭೀರವಾಗಿ ಗಾಯಗೊಂಡಿದ್ದಾನೆ.
ಬಸ್ಸಿಗಾಗಿ ಕಾಯುತ್ತಿದ್ದಾಗ ತೆಂಗಿನ ಮರ ಬಿದ್ದಿದ್ದು, ಘಟನೆ ಬಳಿಕ ನಂದು ಅವರನ್ನು ಮೆಪ್ಪಾಡಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದೇ ವೇಳೆ ಕಲ್ಪಟ್ಟಾ ಕೈನಟ್ಟಿ ಸಿಗ್ನಲ್ ಬಳಿ ಮರವೊಂದು ರಸ್ತೆಗೆ ಬಿದ್ದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮರವನ್ನು ಕಡಿದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.