ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿದರು.
ಈ ಸಭೆಯು ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿದ್ದು, ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತ ಮತ್ತು ವಿವಿಧ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಉಪಸ್ಥಿತರಿದ್ದರು.ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉತ್ತರ ಪ್ರದೇಶ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಕೂಡ ಉಪಸ್ಥಿತರಿದ್ದರು.