ಬೆಂಗಳೂರು: ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು: ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರದ ಸಿಬ್ಬಂದಿ, ಪಿಂಚಣಿ ಮತ್ತು ಸಾರ್ವಜನಿಕ ಅಹವಾಲು ಸಚಿವಾಲಯವು ಆದೇಶ ಹೊರಡಿಸಿದೆ.
ಪ್ರಧಾನ ಮಂತ್ರಿ ನೇತೃತ್ವದ ಕೇಂದ್ರದ ವಿಶೇಷ ಸಮಿತಿಯು ಈ ಹುದ್ದೆಗೆ ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿತ್ತು.
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿ-ಐಜಿಪಿ ಸುಧೀರ್‌ಕುಮಾರ್ ಸಕ್ಸೆನಾ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿ.ಜಿ ತಾಜ್ ಹಸನ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು.
ಇದೀಗ, ಪ್ರವೀಣ್ ಸೂದ್ ಅವರನ್ನು ಸಿಬಿಐನ ನೂತನ ನಿರ್ದೆಶಕರಾಗಿ ನೇಮಕ ಮಾಡಿ, ಆದೇಶ ಹೊರಡಿಸಲಾಗಿದೆ.