ನವದೆಹಲಿ: ಈಶಾನ್ಯ ಭಾರತವನ್ನು ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.
ಗುವಾಹಟಿ ರೈಲು ನಿಲ್ದಾಣದಿಂದ ನ್ಯೂ ಜಲ್ಪೈಗುರಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ಭಾನುವಾರ ತಿಳಿಸಿದೆ.
ನ್ಯೂ ಜಲ್ಪೈಗುರಿಯೊಂದಿಗೆ ಗುವಾಹಟಿಯನ್ನು ಸಂಪರ್ಕಿಸುವ ಈ ರೈಲು, ಪ್ರಸ್ತುತ ವೇಗದ ರೈಲಿಗೆ ಹೋಲಿಸಿದರೆ ಸುಮಾರು ಒಂದು ಗಂಟೆ ಪ್ರಯಾಣದ ಸಮಯವನ್ನು ಉಳಿಸಲಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುವಾಹಟಿಯಿಂದ ನ್ಯೂ ಜಲ್ಪೈಗುರಿ ತಲುಪಲು 5 ಗಂಟೆ 30 ನಿಮಿಷ ತೆಗೆದುಕೊಳ್ಳಲಿದೆ. ಆದರೆ ಪ್ರಸ್ತುತ ವೇಗದ ರೈಲು ಅದೇ ಪ್ರಯಾಣಕ್ಕೆ 6 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.