ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ತನಗೆ ವಿಧಿಸಿರುವ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವಂತೆ ಕೋರಿ ಬಲ್ವಂತ್ ಸಿಂಗ್ ರಾಜೋನಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.

90ರ ದಶಕದಲ್ಲಿ ಪಂಜಾಬ್‌ನಲ್ಲಿ ಖಲೀಸ್ತಾನ ಉಗ್ರರ ಉಪಟಳ ಹೆಚ್ಚಿತ್ತು. ಇದಕ್ಕೆ ಕಡಿವಾಣ ಹಾಕಲು ಬಿಯಾಂತ್ ಸಿಂಗ್ ಸರ್ಕಾರ ದಿಟ್ಟ ಕಾರ್ಯಾಚರಣೆ ಕೈಗೊಂಡಿತ್ತು. ಇದಕ್ಕೆ ಪ್ರತೀಕಾರವಾಗಿ 1995ರ ಆಗಸ್ಟ್ 31ರಂದು ಪಂಜಾಬ್ ಸಚಿವಾಲಯದ ಹೊರಭಾಗದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಬಿಯಾಂತ್ ಸೇರಿದಂತೆ 16 ಜನರು ಮೃತಪಟ್ಟಿದ್ದರು.
ಈ ಪ್ರಕರಣದಲ್ಲಿ 2007ರಲ್ಲಿಯೇ ಬಲ್ವಂತ್ ಸಿಂಗ್‌ಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ರದ್ದುಪಡಿಸುವಂತೆ ಕೋರಿ ಆತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯು ಹತ್ತು ವರ್ಷಗಳಿಂದ ಇತ್ಯರ್ಥಗೊಂಡಿಲ್ಲ. ಹಾಗಾಗಿ, ಮಾನವೀಯ ನೆಲಗಟ್ಟಿನ ಮೇಲೆ ತನಗೆ ವಿಧಿಸಿರುವ ಶಿಕ್ಷೆಯನ್ನು ಮಾರ್ಪಡಿಸಬೇಕು ಎಂದು ಆತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.
ನ್ಯಾಯಮೂರ್ತಿಗಳಾದ ಬಿ.ಆರ್. ಗವೈ, ವಿಕ್ರಮ್ ನಾಥ್ ಹಾಗೂ ಸಂಜಯ್ ಕರೋಲ್ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಕೇಂದ್ರ ಗೃಹ ಇಲಾಖೆಯು ಕ್ಷಮಾದಾನ ಅರ್ಜಿಗಳ ಇತ್ಯರ್ಥ ಸಂಬಂಧ ವಿಳಂಬ ಧೋರಣೆ ತಳೆಯುವುದು ಸರಿಯಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದೆ.