ಹಿರೋಶಿಮಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಹಿರೋಶಿಮಾದಲ್ಲಿ ಏಳು ಮುಂದುವರಿದ ಆರ್ಥಿಕತೆಗಳ(ಜಿ 7) ಗುಂಪಿನ ಶೃಂಗಸಭೆಯಲ್ಲಿ ಜಿ-7 ಮತ್ತು ಜಿ-20 ಅಧ್ಯಕ್ಷರು ಜಾಗತಿಕ ಸವಾಲುಗಳು ಮತ್ತು ಪರಿಹಾರೋಪಾಯಗಳ ಕುರಿತು ಚರ್ಚಿಸಿದರು. ಅಲ್ಲದೇ ವ್ಯಾಪಾರ, ಆರ್ಥಿಕತೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸ್ನೇಹವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದರು. ಪ್ರಸ್ತುತ ಭಾರತ ಜಿ 20 ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದರೆ, ಜಪಾನ್ ಜಿ 7 ಅಧ್ಯಕ್ಷತೆ ವಹಿಸಿದೆ. ಈ ಕಾರಣ ಹಿರೋಶಿಮಾದಲ್ಲಿ ನಡೆಯುವ ಜಿ 7 ಶೃಂಗಸಭೆಯಲ್ಲಿ ನಾನು ಭಾಗಿಯಾಗುತ್ತಿರುವುದು ಅರ್ಥಪೂರ್ಣ ಎನಿಸಲಿದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಮೋದಿ ಮತ್ತು ಕಿಶಿದಾ ನಡುವಿನ ಮಾತುಕತೆಯನ್ನು ಫಲಪ್ರದ ಎಂದು ಟ್ವಿಟರ್ನಲ್ಲಿ ಬಣ್ಣಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಮೋದಿ ಮತ್ತು ಕಿಶಿದಾ ನಡುವಿನ ಮಾತುಕತೆಯನ್ನು ಫಲಪ್ರದ ಎಂದು ಟ್ವಿಟರ್ನಲ್ಲಿ ಬಣ್ಣಿಸಿದ್ದಾರೆ.
ಆಯಾ G-7 ಮತ್ತು G-20 ಅಧ್ಯಕ್ಷರು ಸಮಕಾಲೀನ ಪ್ರಾದೇಶಿಕ ಬೆಳವಣಿಗೆ ಮತ್ತು ಇಂಡೋ-ಪೆಸಿಫಿಕ್ನಲ್ಲಿ ಆಳವಾದ ಸಹಕಾರದ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಅವರು ತಿಳಿಸಿದ್ದಾರೆ. "ದ್ವಿಪಕ್ಷೀಯ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ನಾಯಕರು ಚರ್ಚಿಸಿದರು. ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಉನ್ನತ ತಂತ್ರಜ್ಞಾನ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ" ಎಂದು ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, "ಇಂದು ಬೆಳಗ್ಗೆ ಪಿಎಂ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದೇವೆ. ನಾವು ಭಾರತ-ಜಪಾನ್ ಸಂಬಂಧಗಳ ಸಂಪೂರ್ಣ ಶ್ರೇಣಿಯನ್ನು ಪರಿಶೀಲಿಸಿದ್ದೇವೆ ಮತ್ತು ನಮ್ಮ ಗ್ರಹವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಭಾರತದ ಜಿ-20 ಪ್ರೆಸಿಡೆನ್ಸಿ ಮತ್ತು ಜಪಾನ್ನ ಜಿ-7 ಪ್ರೆಸಿಡೆನ್ಸಿಯ ಕೇಂದ್ರೀಕೃತ ಕ್ಷೇತ್ರಗಳ ಕುರಿತು ಚರ್ಚಿಸಿದ್ದೇವೆ" ಎಂದು ಹೇಳಿದ್ದಾರೆ. ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಜಿ 7 ಗುಂಪಿನ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿರೋಶಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹಿರೋಶಿಮಾದಲ್ಲಿನ ಮಹಾತ್ಮ ಗಾಂಧಿಯವರ ಪ್ರತಿಮೆ ಮುಖ್ಯವಾದ ಸಂದೇಶವನ್ನು ನೀಡುತ್ತದೆ. ಶಾಂತಿ ಮತ್ತು ಸೌಹಾರ್ದತೆಯ ಗಾಂಧಿ ಆದರ್ಶಗಳು ಜಾಗತಿಕವಾಗಿ ಪ್ರತಿಧ್ವನಿಸುತ್ತವೆ ಮತ್ತು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತವೆ" ಎಂದು ಹೇಳಿದ್ದಾರೆ. ಕಿಶಿಡಾ ಅವರ ಆಹ್ವಾನದ ಮೇರೆಗೆ ಜಿ7 ಶೃಂಗಸಭೆಯಲ್ಲಿ ಮೂರು ಅಧಿವೇಶನಗಳಲ್ಲಿ ಭಾಗವಹಿಸಲು ಮೋದಿಯವರು ಶುಕ್ರವಾರ ಹಿರೋಶಿಮಾಗೆ ತೆರಳಿದ್ದಾರೆ.