ಮುಂಬೈ(PTI): ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ 37ನೇ ಸಾಕ್ಷಿದಾರ ವಿಚಾರಣೆ ವೇಳೆ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ.
ಮುಂಬೈ(PTI): ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ 37ನೇ ಸಾಕ್ಷಿದಾರ ವಿಚಾರಣೆ ವೇಳೆ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ.
'ಪ್ರಜ್ಞಾ ಸಿಂಗ್ ಅವರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ ಮತ್ತು ಅವರ ಪರಿಚಯವಿದೆ' ಎಂದು ಸಾಕ್ಷಿದಾರ ವ್ಯಕ್ತಿಯು ಪ್ರಕರಣದ ತನಿಖೆ ನಡೆಸಿದ್ದ ಮಹಾರಾಷ್ಟ್ರ ಪೊಲೀಸರ ಭಯೋತ್ಪಾದಕ ನಿಗ್ರಹ ದಳಕ್ಕೆ(ಎಟಿಎಸ್) ಈ ಹಿಂದೆ ಹೇಳಿಕೆ ನೀಡಿದ್ದರು.
ಆದರೆ ಬುಧವಾರ ನಡೆದ ವಿಚಾರಣೆಯ ವೇಳೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಧೀಶರ ಮುಂದೆ ಸಾಕ್ಷಿದಾರ ವ್ಯಕ್ತಿಯು ತಾವು ಈ ಹಿಂದೆ ನೀಡಿದ ಹೇಳಿಕೆಯನ್ನು ಅಲ್ಲಗಳೆದಿದ್ದು, ತಮಗೆ ಪ್ರಜ್ಞಾ ಅವರ ಪರಿಚಯವಿಲ್ಲ ಎಂದಿದ್ದಾರೆ.
ಈ ಪ್ರಕರಣದಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. 37 ಸಾಕ್ಷಿದಾರರು ಹೇಳಿಕೆ ಬದಲಿಸಿದ್ದರು.
ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ಪ್ರಜ್ಞಾ ಠಾಕೂರ್ ಮತ್ತು ಇತರ ಐವರ ವಿರುದ್ಧ ಎನ್‌ಐಎ ನ್ಯಾಯಾಲಯವು ಸಂಚು ರೂಪಿಸಿರುವ ಮತ್ತು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಶಾಮೀಲಾಗಿರುವ ಆರೋಪ ಹೊರಿಸಿದ ಬಳಿಕ 2018ರಲ್ಲಿ ವಿಚಾರಣೆ ಆರಂಭಗೊಂಡಿತ್ತು.
ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಸ್ಫೋಟದಲ್ಲಿ 6 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.