HEALTH TIPS

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಅಡಗುತಾಣ ಪತ್ತೆ ಮಾಡಿದ ಭದ್ರತಾ ಪಡೆ

                ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರೊಂದಿಗಿನ ಅಲ್ಪಾವಧಿಯ ಗುಂಡಿನ ಚಕಮಕಿಯ ನಂತರ ಭದ್ರತಾ ಪಡೆಗಳು ಭಾನುವಾರ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

                ಜಿಲ್ಲೆಯ ಸಂಗಮ್ ಪ್ರದೇಶದ ಅಂದಾನ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

               ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು ಮತ್ತು ಅಲ್ಪಾವಧಿಯ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ನಂತರದ ಹುಡುಕಾಟದಲ್ಲಿ ಕಂಬಳಿಗಳು ಮತ್ತು ಇತರ ವಸ್ತುಗಳು 'ಗುಹೆಯಂತಹ' ಅಡಗುತಾಣದಲ್ಲಿ ಕಂಡುಬಂದಿವೆ ಎಂದು ಅಧಿಕಾರಿ ಹೇಳಿದ್ದಾರೆ.

                 ಎರಡೂ ಕಡೆಗಳಲ್ಲೂ ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries