ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿ ಕುಟುಂಬಗಳಿಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ.
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿ ಕುಟುಂಬಗಳಿಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ.
ಗಡಿಯಾಚೆಯಿಂದ ರೂಪಿಸುತ್ತಿರುವ ಭಯೋತ್ಪಾದಕರ ದಾಳಿಯನ್ನು ಎದುರಿಸಲು ದೃಢದ ಸಂಕಲ್ಪ ಮಾಡಿದ್ದೇವೆ ಎಂದು ಮನೋಜ್ ಸಿನ್ಹಾ ತಿಳಿಸಿದ್ದಾರೆ.
ಭಯೋತ್ಪಾದಕರ ವಿರುದ್ಧದ ಜಂಟಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ವೀರ ಸೇನಾ ಸಿಬ್ಬಂದಿಯ ಕುಟುಂಬಗಳಿಗೆ ಸಂತಾಪ ತಿಳಿಸುತ್ತೇನೆ ಎಂದರು.
ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಮನೋಜ್ ಸಿನ್ಹಾ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸೇನೆ ಮತ್ತು ಜಮ್ಮು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.