ನವದೆಹಲಿ: ಒಂದು ವೇಳೆ ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಯಾವತ್ತೂ ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ.
ನವದೆಹಲಿ: ಒಂದು ವೇಳೆ ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಯಾವತ್ತೂ ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ.
ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಅಧಿಕಾರದಲ್ಲಿ ಇರುವುದಿಲ್ಲ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ.
'ಕರ್ನಾಟಕದ ಕಾಂಗ್ರೆಸ್ ಗೆಲುವನ್ನು ಇಡೀ ದೇಶ ಸಂಭ್ರಮಿಸುತ್ತಿದೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಯನ್ನು ಜನ ಪ್ರೀತಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸತ್ಯದ ದ್ಯೋತಕ' ಎಂದು ಅವರು ಬಣ್ಣಿಸಿದರು.