ತಿರುವನಂತಪುರ: ಬಸ್‌ನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ತಿರುವನಂತಪುರ: ಬಸ್‌ನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ತ್ರಿಶ್ಶೂರ್ ಜಿಲ್ಲೆಯ ಯುವತಿಯು ರಾಜ್ಯದ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಮಂಗಳವಾರ ಬೆಳಿಗ್ಗೆ ಕೊಚ್ಚಿಗೆ ಪ್ರಯಾಣಿಸಿದ್ದರು.
ಆರೋಪಿಯನ್ನು ಕೋಯಿಕ್ಕೋಡ್‌ನ ಸವದ್ ಶಾ ಎಂದು ಗುರುತಿಸಲಾಗಿದೆ. ಈತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ. ಇದನ್ನು ಪ್ರಶ್ನಿಸಿದ್ದ ಯುವತಿಯು ಪೊಲೀಸರಿಗೆ ದೂರು ನೀಡುವುದಾಗಿ ಗದರಿದ್ದರು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದ ಆತ, ಬಸ್‌ನ ನಿರ್ವಾಹಕನನ್ನು ತಳ್ಳಿ ಕೆಳಕ್ಕಿಳಿದಿದ್ದ. ಬಳಿಕ ಪರಾರಿಯಾಗಲು ಯತ್ನಿಸಿದ್ದ. ನಿರ್ವಾಹಕ ಹಾಗೂ ಬಸ್ ಚಾಲಕ ಆತನನ್ನು ಬೆನ್ನಟ್ಟಿ ಹಿಡಿದಿದ್ದರು. ಬಳಿಕ ನೆಡುಂಬಶ್ಶೆರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.