ತಿರುವನಂತಪುರಂ: ಶುಕ್ರವಾರ ಪ್ರಕಟಗೊಂಡ ಪ್ಲಸ್ ಟು ಪರೀಕ್ಷೆ ಫಲಿತಾಂಶ ಹಿಂಪಡೆಯಲಾಗಿದೆ ಎಂಬ ಸಂದೇಶಗಳು ಹರಿದಾಡುತ್ತಿದ್ದು, ಸುದ್ದಿ ಹುಸಿಯಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಸುಳ್ಳು ಸುದ್ದಿ ಹಬ್ಬಿಸಿದ ಯೂಟ್ಯೂಬ್ ಚಾನೆಲ್ ವಿರುದ್ಧ ಶಿಕ್ಷಣ ಇಲಾಖೆ ಕಾನೂನು ಕ್ರಮ ಕೈಗೊಂಡಿದೆ.
ಯೂಟ್ಯೂಬ್ ಚಾನೆಲ್ ವಿ ಕ್ಯಾನ್ ಮೀಡಿಯಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ವಿ ಶಿವನ್‍ಕುಟ್ಟಿ ಮಾಹಿತಿ ನೀಡಿದ್ದಾರೆ. ಈ ಯೂಟ್ಯೂಬ್ ಚಾನೆಲ್ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಕಳೆದ ದಿನ ಪ್ಲಸ್ ಟು ಫಲಿತಾಂಶ ಪ್ರಕಟವಾಗಿತ್ತು. ಪ್ಲಸ್ ಟು ಪರೀಕ್ಷೆಯಲ್ಲಿ ಶೇ.82.95ರಷ್ಟು ಉತ್ತೀರ್ಣತೆ ದಾಖಲಾಗಿದೆ. ಇದಾದ ಬಳಿಕ ಯೂಟ್ಯೂಬ್ ಚಾನೆಲ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಆಗ ಶಿಕ್ಷಣ ಸಚಿವರೇ ನೇರವಾಗಿ ಘಟನೆ ಬಗ್ಗೆ ಮಧ್ಯಪ್ರವೇಶಿಸಿ ಹೇಳಿಕೆ ನೀಡಿದ್ದಾರೆ.