ಹೈದರಾಬಾದ್: ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ.
ಹೈದರಾಬಾದ್: ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ.
ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ ಎಂದು ಪೊಲೀಸ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.
ಮೃತರನ್ನು ಚೇರ್ಲಾ ಸಂಘಟನೆಯ ರಾಜೇಶ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಿಂದ ಎರಡು ಎಸ್‌ಎಲ್‌ಆರ್ ರೈಫಲ್ ಸೇರಿದಂತೆ ಕೆಲವು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗೆ ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ಸ್ಪೋಟಕ ಸಿಡಿಸಿ 11 ಪೊಲೀಸರನ್ನು ಕೊಂದಿದ್ದರು.