ಕೊಚ್ಚಿ: ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡುವಂತೆ ಕೇರಳ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕೂಡಲೇ ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಆದರೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತುರ್ತು ತಡೆ ಕೋರಿಕೆಯನ್ನು ತಿರಸ್ಕರಿಸಿದೆ.
ಗಲ್ರ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕೂಡ ಚಿತ್ರದ ಪ್ರದರ್ಶನವನ್ನು ನಿಲ್ಲಿಸುವಂತೆ ಕೋರಿ ಹೈಕೋರ್ಟ್‍ನ ಮೊರೆ ಹೋಗಿದೆ.
ಚಿತ್ರದ ವಿಷಯವು ವಿಚಾರಣೆಯಿಂದ ಮಾತ್ರ ತಿಳಿಯುತ್ತದೆಯೇ ಎಂದು ನ್ಯಾಯಾಲಯವು ಅರ್ಜಿದಾರರನ್ನು ಕೇಳಿದೆ.ಟೀಸರ್‍ನ ಹಲವು ಭಾಗಗಳು ಕೇರಳದ ಮಾನಹಾನಿಕರವಾಗಿದ್ದು, ಪ್ರಸ್ತುತ ಸೆನ್ಸಾರ್ ಮಂಡಳಿಯು ಕೇವಲ 10 ದೃಶ್ಯಗಳನ್ನು ಮಾತ್ರ ತೆಗೆದುಹಾಕಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಗಲ್ರ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಜಮಾತ್-ಎ-ಇಸ್ಲಾಮಿ ಹಿಂದ್‍ನ ಬಾಲಕಿಯರ ವಿದ್ಯಾರ್ಥಿ ಸಂಘಟನೆಯಾಗಿದೆ.