ಬಳ್ಳಾರಿ: 'ದಿ ಕೇರಳ ಸ್ಟೋರಿ' ಚಿತ್ರವು ಭಯೋತ್ಪಾದನೆಯ ಪಿತೂರಿಯನ್ನು ಆಧರಿಸಿದ್ದಾಗಿದ್ದು, ಇದು ಭಯೋತ್ಪಾದನೆಯ ಕೊಳಕು ಸತ್ಯವನ್ನು ತೋರಿಸುತ್ತದೆ ಮತ್ತು ಭಯೋತ್ಪಾದಕರ ವಿನ್ಯಾಸವನ್ನು ಬಹಿರಂಗಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕುಮಾರಸ್ವಾಮಿ ದೇವಾಲಯಕ್ಕೆ ನನ್ನ ನಮಸ್ಕಾರಗಳು. ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಆರ್ಶಿವಾದ ಮಾಡಲು ಆಗಮಿಸಿದ್ದೀರಾ. ನಿಮ್ಮಗೆ ನನ್ನ ನಮಸ್ಕಾರಗಳು. ನಿನ್ನೆ ರಾತ್ರಿ ಮಳೆ ಬಂದ್ರೂ ದೊಡ್ಡ ಸಂಖ್ಯೆಯಲ್ಲಿ ಎಲ್ಲರೂ ಬಂದಿದ್ದೀರಾ.
ಇದೇ ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಮೋದಿ ಹೇಳಿದರು.
'ಭಯೋತ್ಪಾದನೆ ಮತ್ತು ಭಯೋತ್ಪಾದನಾ ಪ್ರವೃತ್ತಿಯ ಚಲನಚಿತ್ರಗಳನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಕಾಂಗ್ರೆಸ್ ಮತ ಬ್ಯಾಂಕ್ಗಾಗಿ ಭಯೋತ್ಪಾದನೆಯನ್ನು ರಕ್ಷಿಸಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ಗಾಗಿ ಭಯೋತ್ಪಾದನೆಗೆ ಬಲಿಯಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ.
ಇಂತಹ ಪಕ್ಷ ಎಂದಾದರೂ ಕರ್ನಾಟಕವನ್ನು ಉಳಿಸಲು ಸಾಧ್ಯವೇ? ಭಯೋತ್ಪಾದನೆಯ ವಾತಾವರಣದಲ್ಲಿ, ಇಲ್ಲಿನ ಉದ್ಯಮ, ಐಟಿ ಉದ್ಯಮ, ಕೃಷಿ, ಕೃಷಿ ಮತ್ತು ವೈಭವದ ಸಂಸ್ಕೃತಿ ನಾಶವಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ಮಾಡಿ ದೇಶದ ಜನರನ್ನು ಮೋಸ ಮಾಡಿದೆ. ಸುಳ್ಳು ಸರ್ವೆಗಳನ್ನು ಮಾಡಿಸಿ ದೇಶದ ಜನರನ್ನು ಕಾಂಗ್ರೆಸ್ ವಂಚಿಸಿದೆ.
ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸರ್ವೆ ಮಾಡಿಸಿದೆ. ಹಣ ಬಲದ ಜೊತೆಗೆ ಸುಳ್ಳು ಸರ್ವೆ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಸ್ವಾತಂತ್ರ್ಯದ ಬಳಿಕ ದೇಶದ ವ್ಯವಸ್ಥೆಯನ್ನು ಕಾಂಗ್ರೆಸ್ ಭ್ರಷ್ಟ ಮಾಡಿತ್ತು. ಭ್ರಷ್ಟಾಚಾರವನ್ನು ಮಾಡಿ ದೇಶದ ಜನರನ್ನು ಮೋಸ ಮಾಡಿದೆ.
ಸುಳ್ಳು ಸರ್ವೆಗಳನ್ನು ಮಾಡಿಸಿ ದೇಶದ ಜನರನ್ನು ಕಾಂಗ್ರೆಸ್ ವಂಚಿಸಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸರ್ವೆ ಮಾಡಿಸಿದೆ. ಹಣ ಬಲದ ಜೊತೆಗೆ ಸುಳ್ಳು ಸರ್ವೆ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಕರ್ನಾಟಕವನ್ನು ದೇಶದ ನಂಬರ್ 1 ರಾಜ್ಯ ಮಾಡುತ್ತೇವೆ.
ಬಿಜೆಪಿ ಪ್ರಣಾಳಿಕೆಯನ್ನು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಸುಳ್ಳು ಮೂಟೆಯ ಪ್ರಣಾಳಿಕೆಯನ್ನು ಹೊರಡಿಸಿದೆ. ಪ್ರಣಾಳಿಕೆಯಲ್ಲಿ ಬಜರಂಗಳ ನಿಷೇಧ ಮಾಡುವುದಾಗಿ ಘೋಷಿಸಿದೆ ಎಂದು ಮೋದಿ ಹೇಳಿದರು.