ತಿರುವನಂತಪುರಂ: ರಾಜ್ಯದಲ್ಲಿ ಇಂದು ಭಾರೀ ಬೇಸಿಗೆ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ ಬಳಿಕ ಧಾರಾಕಾರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಎರ್ನಾಕುಳಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪೂರ್ವ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಿಂದ ವಿದರ್ಭ ಕರಾವಳಿಯ ವರೆಗೆ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ಭಾರೀ ಮಳೆಯಾಗಲಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಭಾರೀ ಮಳೆ ದಾಖಲಾಗಿದೆ. ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.