ಕುಂಬಳೆ: ಕೇರಳ ಜರ್ನಲಿಸ್ಟ್ ಯೂನಿಯನ್(ಕೆಜೆಯು) ಕುಂಬಳೆ ಘಟಕದ ಆಶ್ರಯದಲ್ಲಿ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಕುಂಬಳೆ ಪ್ರೆಸ್ ಪೋರಂನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಸುರೇಂದ್ರನ್ ಚೆಮೇನಿ ಅಧ್ಯಕ್ಷತೆ ವಹಿಸಿದ್ದರು. ಕೆಜೆಯು ಜಿಲ್ಲಾಧ್ಯಕ್ಷ ಅಬ್ದುಲ್ ಲತೀಫ್ ಉಳುವಾರ್ ಧ್ವಜಾರೋಹಣಗೈದರು. ಖ್ಯಾತ ಶಿಕ್ಷಣ ತಜ್ಞ ಹಾಗೂ ಕುಂಬಳೆ ಮಹಾತ್ಮಾ ಕಾಲೇಜಿನ ಪ್ರಾಂಶುಪಾಲ ಕೆ.ಎಂ.ಎ ಸತ್ತಾರ್ ಉದ್ಘಾಟಿಸಿದರು.
ಕಾರ್ಯಕಾರಿ ಸಮಿತಿ ಸದಸ್ಯರಾದ ಐ.ಎಂ. ರಫೀಕ್, ಧನರಾಜ್ ಐಲ, ರಫೀಕ್ ಉಪ್ಪಳ, ಜುಬೇರ್ ಮುಂತಾದವರು ಉಪಸ್ಥಿತರಿದ್ದರು. ಪ್ರೆಸ್ ಪೋರಂ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಕುಂಬಳೆ ಸ್ವಾಗತಿಸಿ, ಕೋಶಾಧಿಕಾರಿ ಅಬ್ದುಲ್ ಲತೀಫ್ ಕುಂಬಳೆ ವಂದಿಸಿದರು.