ಭೋಪಾಲ್ (PTI): ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಬಿಡುಗಡೆ ಮಡಿರುವ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧಿಸುವ ಪ್ರಸ್ತಾಪವಿಲ್ಲ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಕಮಲ್‌ನಾಥ್ ಅವರು ಭಾನುವಾರ ಹೇಳಿದ್ದಾರೆ.

ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯೂ ನಡೆಯಲಿದ್ದು, ಕರ್ನಾಟಕ ಮಾದರಿಯಲ್ಲಿ ಮಧ್ಯಪ್ರದೇಶದಲ್ಲೂ ಬಜರಂಗ ದಳ ನಿಷೇಧಿಸುವ ಭರವಸೆಯನ್ನು ನೀಡುತ್ತೀರಾ ಎಂದು ಸುದ್ದಿಗಾರರು ಕಮಲ್‌ನಾಥ್ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ಬಜರಂಗ ದಳ ನಿಷೇಧಿಸುವ ಭರವಸೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಲಾಗಿಲ್ಲ ಎಂದರು.
'ಸಮಾಜದಲ್ಲಿ ದ್ವೇಷ ಬಿತ್ತುವವರು ಮತ್ತು ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೆಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜೊತೆಗೆ, ಜನರೂ ಅದನ್ನೇ ಬಯಸುತ್ತಾರೆ. ಯಾವ ನಿರ್ದಿಷ್ಟ ಗುಂಪನ್ನೂ ಗುರಿಯಾಗಿಸುವುದಿಲ್ಲ ಆದರೆ ಸಾಮಾಜಿಕ ಸ್ವಾಸ್ಥ್ಯ ಹದಗೆಡಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು' ಎಂದರು.
ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಕಮಲ್‌ನಾಥ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ದರದಲ್ಲಿ ಮಧ್ಯಪ್ರದೇಶವು ಮೊದಲ ಸ್ಥಾನಗಳಲ್ಲಿ ಇದೆ ಎಂದು ಹೇಳಿದರು.