ಬದಿಯಡ್ಕ: ಬದಿಯಡ್ಕ ಗ್ರಾಮಪಂಚಾಯಿತಿ ವಯೋಜನರ ಹಗಲು ಮನೆಯಲ್ಲಿ ತೊರವೆ ರಾಮಾಯಣದ ಕುಂಭಾಸುರ ವಧೆ ಎಂಬ ಕಥಾ ಭಾಗದ ಪುರಾಣ ವಾಚನ ಕಾರ್ಯಕ್ರಮ ಜರುಗಿತು.
ಭಾಗವತ ಬೆಂದ್ರೋಡು ಗೋವಿಂದ ಭಟ್ಟರು ತಮ್ಮ ಸುಶ್ರಾವ್ಯ ಕಂಠದಿಂದ ಗಮನಸೆಳೆದರು. ನಿವೃತ್ತ ಪ್ರಾಂಶುಪಾಲ ಡಾ.ಬೇ.ಸೀ.ಗೋಪಾಲಕೃಷ್ಣ ಭಟ್ಟರು ಅರ್ಥ ವಿವರಣೆಯನ್ನು ನೀಡಿದರು. ಬಳಿಕ ನಡೆದ ಸಮಾರಂಭದಲ್ಲಿ ಕೇರಳ ಹಿರಿಯ ನಾಗರಿಕರ ವೇದಿಕೆಯ ಬದಿಯಡ್ಕ ಘಟಕದ ಅಧ್ಯಕ್ಷ ಪೆರ್ಮುಖ ಈಶ್ವರ ಭಟ್ ಕಲಾವಿದರನ್ನು ಶಾಲು ಹೊದಿಸಿ ಸ್ಮರಣಿಕೆಯನ್ನಿತ್ತು ಗೌರವಿಸಿದರು. ವೇದಿಕೆಯ ಕಾರ್ಯದರ್ಶಿ ಸಂಪತ್ತಿಲ ಶಂಕರನಾರಾಯಣ ಭಟ್ ವಂದಿಸಿದರು.